ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ನಗರದ ಬೋಂದೆಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆ. 08ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸ್‍ ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ತುಂಬಲು ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರವೇಶ ಪ್ರಕ್ರಿಯೆಯಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಇದೆ. ಅರ್ಹ ಅಭ್ಯರ್ಥಿಗಳು ನಗರದ ಬೋಂದೆಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:  0824-2482334, 9611320910 ಹಾಗೂ 9844744845 ಕರೆ ಮಾಡುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ಪೊಲೀಸ್ ಗುಂಡಿಗೆ ಇಬ್ಬರು ಬಲಿ..? ➤ ಕರ್ಫ್ಯೂ ನಂತರ ಪರಿಸ್ಥಿತಿ ಹತೋಟಿಗೆ

error: Content is protected !!
Scroll to Top