ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಉಡುಪಿ, ಜು. 29. ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳನ್ನು ಹರಿಯ ಬಿಟ್ಟಿದ್ದು, ಈ ಹೇಳಿಕೆಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ.

ಈ ಹಿನ್ನೆಲೆಯಲ್ಲಿ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು ಸುಳ್ಳು ಹೇಳಿಕೆ ನೀಡಿ ಜಾಲತಾಣದಲ್ಲಿ ಹರಿಯಬಿಟ್ಟ ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಹರೀಶ್ ಶೆಟ್ಟಿ ಪಾಂಗಾಳ್ವ ಭಾಸ್ಕರ್ ರಾವ್ ಕಿದಿಯೂರು, ಬಿ.ಕುಶಲ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ನಾಗೇಶ್ ಕುಮಾರ ಉದ್ಯಾವರ, ಜಯಕುಮಾರ್ ಹಾಗೂ ಎನ್‌ಎಸ್‌ಯುಐ ಪದಾಧಿಕಾರಿಗಳು ಉಪಸ್ಥಿತರಿದ್ದರು.

Also Read  ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ - ಮಹಿಳೆಗೆ ಢಿಕ್ಕಿ

error: Content is protected !!
Scroll to Top