(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪತ್ನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕುಮಾರ್ ಅವರು ಎನ್.ಐ.ಎ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಪ್ರತಿದಿನ ಬಿಸಿರೋಡಿನ ಪೊಲೀಸ್ ವಸತಿ ಗೃಹಕ್ಕೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಪರೂಪಕ್ಕೊಮ್ಮೆ ಪೊಲೀಸ್ ವಸತಿ ಗೃಹದಲ್ಲಿ ತಂಗುತ್ತಿದ್ದರು ಎಂದು ವರದಿ ತಿಳಿಸಿದೆ.