(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರವು 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಗ್ರೇಡ್ -1, ಗ್ರೇಡ್ -2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪೈಕಿ 22 ಮಂದಿಯನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮುಂದುವರೆಸಲು ತಿಳಿಸಲಾಗಿದೆ.
ಒಟ್ಟು ಮೂರು ಪಟ್ಟಿಯಲ್ಲಿ 146 ರಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನೂ ಹಲವರ ವರ್ಗಾವಣೆ ಪಟ್ಟಿ ಸಿಎಂ ಅನುಮೋದನೆಗೆ ಬಾಕಿ ಇದೆ ಎಂದು ಹೇಳಲಾಗಿದೆ.
ತಮ್ಮಿಷ್ಟಕ್ಕೆ ತಕ್ಕಂತೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ಶಾಸಕರ ಕೋರಿಕೆಯಂತೆ ವರ್ಗಾವಣೆ ಮಾಡಲಾಗಿದ್ದು, ಒಂದು ಪಟ್ಟಿಯಲ್ಲಿ 84, ಮತ್ತೊಂದು ಪಟ್ಟಿಯಲ್ಲಿ 46, ಇನ್ನೊಂದು ಪಟ್ಟಿಯಲ್ಲಿ 16 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನೊಂದು ವರ್ಗಾವಣೆ ಪಟ್ಟಿ ಸಿದ್ದವಾಗಿದ್ದು, ಸಿಎಂ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದೆನ್ನಲಾಗಿದೆ.