ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ- ವೃದ್ಧನ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ಬೀಳುತ್ತಿದ್ದ ವೃದ್ದನೋರ್ವನನ್ನು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರದಂದು ಸಂಜೆ ಮಲಬಾರ್ ಎಕ್ಸ್‌ ಪ್ರೆಸ್ ರೈಲು ಹೊರಟು ಚಲಿಸಲಾರಂಭಿಸಿದಾಗ ಶಂಕರ್ ಬಾಬು(70) ಎಂಬ ಪ್ರಯಾಣಿಕರೋರ್ವರು ರೈಲಿನ ಎಸ್-6 ಕೋಚ್‌ ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೇ ಹ್ಯಾಂಡಲ್‌ನಲ್ಲಿ ನೇತಾಡುತ್ತಿದ್ದರು ಇದನ್ನು ಗಮನಿಸಿದ ಆರ್‌ ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಸಮಸ್ಯೆಯಾಗುವ ಸಾಧ್ಯತೆ ಇತ್ತು. ಘಟನೆಯಿಂದ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read  ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ

error: Content is protected !!
Scroll to Top