(ನ್ಯೂಸ್ ಕಡಬ)newskadaba.com ಕಾಪು, ಜು.29. ಕುಡಿದ ಅಮಲಿನಲ್ಲಿದ್ದ ಸ್ಕೂಟರ್ ಸವಾರರು ಪಾದಚಾರಿಗಳಿಬ್ಬರ ಜೊತೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ಇರಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಉದ್ಯಾವರ ಗ್ರಾಮದ ನಿವಾಸಿಗಳಾದ ಜಯರಾಮ ತಿಂಗಳಾಯ ಮತ್ತು ಸಂದೀಪ್ ಇರಿತಕ್ಕೊಳಗಾಗಿದ್ದು, ಕುರ್ಕಾಲು ಸುಭಾಸ್ ನಗರದ ನಿವಾಸಿಗಳಾದ ಪ್ರೇಮನಾಥ್, ಸಂಪತ್ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ.
ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದು, ಬಂಧಿತರಿಗೆ ನ್ಯಾಯಾಲಯ ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಜಯರಾಮ ತಿಂಗಳಾಯ ಮತ್ತು ಸಂದೀಪ್ ನಡೆದುಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ಎದುರಿನಿಂದ ಹೆಡ್ ಲೈಟ್ ಹಾಕದೆ ಸ್ಕೂಟರ್ ವೊಂದರಲ್ಲಿ ಬಂದ ಆರೋಪಿಗಳು ರಸ್ತೆ ದಾಟಲು ನಿಂತಿದ್ದವರಿಗೆ ಢಿಕ್ಕಿ ಹೊಡೆಯುವ ರೀತಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದರು ಎನ್ನಲಾಗಿದೆ.