ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆಟೋ ಚಾಲಕ ಗಾಯಗೊಂಡಿದ್ದು, ಹನೀಪ್ ಎಂದು ಗುರುತಿಸಲಾಗಿದೆ. ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ.

ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top