ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಶಾಫಿ ಎಂದು ಗುರುತಿಸಲಾಗಿದೆ.

12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು.

ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

error: Content is protected !!

Join the Group

Join WhatsApp Group