ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.30. ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆಗೆ ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಭದ್ರಾವತಿ ಮೂಲದ ಯುವಕ ಶರತ್ ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸುತ್ತಿದ್ದವು . ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಇಂದು ಜಾರಿ ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

Also Read  ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ: ಕೆಮ್ಮಾರ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ

error: Content is protected !!
Scroll to Top