ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

Theft, crime, Robbery

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ.


ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

error: Content is protected !!
Scroll to Top