ಕ್ರಿಕೆಟ್ ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ಆಟಗಾರ ಸ್ಟುವರ್ಟ್ ಬ್ರಾಡ್

(ನ್ಯೂಸ್ ಕಡಬ) newskadaba.com ಲಂಡನ್, ಜು. 30. ಇಂಗ್ಲೆಂಡ್ ಕ್ರಿಕೆಟ್ ತಂಡದ ಆಟಗಾರ ಸ್ಟುವರ್ಟ್ ಬ್ರಾಡ್ ಅವರು ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತಮ್ಮ ವಿದಾಯ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. ಇನ್ನು 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿಸಿಕೊಂಡಿದ್ದ ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್ ಟೀಮ್ ನ ಲೆಜೆಂಡ್ ಆಗಿ ಬೆಳೆದಿದ್ದಾರೆ. ಬ್ರಾಡ್ ಅವರು ಒಟ್ಟು 165 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 602 ವಿಕೆಟ್ ಕಬಳಿಸಿದ್ದು , ಇದೀಗ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತಮ್ಮ ವಿದಾಯ ಘೋಷಣೆ ಮಾಡಿದ್ದಾರೆ.

Also Read  ಮನೋಕಾಮನೆಗಳನ್ನು ವಶಪಡಿಸಿಕೊಳ್ಳುವ ತಂತ್ರ

error: Content is protected !!
Scroll to Top