ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಡಿಸಿ ಮನ್ನಾ ಜಾಗದ ಬಗ್ಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದು, ಈ ಸಮಸ್ಯೆ ಇತ್ಯರ್ಥಪಡಿಸಲು ಸರ್ಕಾರ ಕ್ರಮ ವಹಿಸುವ ವಿಶ್ವಾಸವಿದೆ. ಮಾತ್ರವಲ್ಲದೆ ದಲಿತರ ಹಲವು ಬೇಡಿಕೆಗಳಿಗೆ ಸರ್ಕಾರದಲ್ಲಿ ಹೆಚ್ಚಿನ ಮಹತ್ವ ಸಿಗಲಿದೆ ಎಂದು ತಿಳಿಸಿದರು. ದ.ಕ.ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸಂಚಾಲಕ ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೊಂಚಾಡಿ ಮಾತನಾಡಿ, 5300 ಎಕರೆ ಭೂಮಿಯನ್ನು ಮಾತ್ರವೇ ದಲಿತರಿಗೆ ಹಂಚಲಾಗಿದ್ದು, ಉಳಿಕೆ ಜಮೀನನ್ನು ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

Also Read  ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ

 

 

error: Content is protected !!
Scroll to Top