(ನ್ಯೂಸ್ ಕಡಬ) newskadaba.com ಉಡುಪಿ, ಜು. 31. ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಗ್ರ ಕೋಬ್ರಾ ಎಂಬ ಖಾತೆಯನ್ನು ಹೊಂದಿದ್ದ ಆರೋಪಿಯು, ನೊಂದ ಯುವತಿಯ ಇನ್ಸ್ಟಾಗ್ರಾಮ್ ಖಾತೆಯನ್ನು ಫಾಲೋ ಮಾಡಿ, ಶುಕ್ರವಾರದಂದು ಆಕೆಯನ್ನು ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದು ಆಕೆಗೆ ಪರಿಚಯದವರಿಂದ ತಿಳಿದು ಬಂದಿದ್ದು, ಇದರಿಂದ ತನ್ನ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾನೆ ಎಂದು ಆಕೆ ದೂರು ನೀಡಿದ್ದು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.