ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮುಖ್ಯಮಂತ್ರಿ ಅಮಿತ್ ಷಾ ಪುತ್ರ ಜಯ್ ಷಾ ಭೇಟಿ ನೀಡಿದ್ದಾರೆ. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ಆರಂಭದಲ್ಲಿ ಸಂಪರ್ಕ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದ್ದು, ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಸತ್ಯ ನಾರಾಯಣ ನೂರಿತ್ತಾಯರು ಜಯ್ ಷಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಕೇಂದ್ರ ಗೃಹಮಂತ್ರಿ ಅಮಿತ್ ಷಾ ಹೆಸರಲ್ಲಿ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು ಎಂದು ತಿಳಿದುಬಂದಿದೆ.

 

Scroll to Top