(ನ್ಯೂಸ್ ಕಡಬ)newskadaba.com ಪುತ್ತೂರು, ಜು.31. ನನಗೆ ಯಾರೂ ಲಂಚ ಕೊಡಬೇಡಿ, ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂದು ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ಮಹಿಳಾ ಅಧಿಕಾರಿ ತಮ್ಮ ಕಚೇರಿಯಲ್ಲಿ ಬ್ಯಾನರ್ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.
ಇದು ಮಾದರಿ ನಡೆ, ಎಲ್ಲಾ ಅಧಿಕಾರಿಗಳೂ ಈ ರೀತಿ ಬೋರ್ಡ್ ಹಾಕಿಸಿಕೊಳ್ಳಬೇಕು ಎಂದು ಜನರು ವ್ಯಕ್ತಪಡಿಸಿದ್ದಾರೆ.
ಸರಕಾರಿ ಕಚೇರಿಯಲ್ಲಿ ವ್ಯಾಪಕ ಲಂಚ ಕೊಟ್ಟರೆ ಮಾತ್ರ ಅಧಿಕಾರಿಗಳೂ ಸ್ಪಂದನೆ ನೀಡುತ್ತಾರೆ ಎಂಬ ಭಾವನೆ ಜನ ಸಾಮಾನ್ಯರಲ್ಲಿ ಹಾಸು ಹೊಕ್ಕಿದೆ. ಬೆಂಗಳೂರು ಇದರ ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ಮಹಿಳಾ ಅಧಿಕಾರಿ ತಮ್ಮ ಕಚೇರಿಯಲ್ಲಿ ನನಗೆ ಯಾರೂ ಲಂಚ ಕೊಡಬೇಡಿ, ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂದು ಬ್ಯಾನರ್ ಅಳವಡಿಸಿದ್ದಾರೆ.
