ಶಾರ್ಜಾಕ್ಕೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ- ಕೆಲಕಾಲ ಭಯದ ವಾತಾವರಣ ಸೃಷ್ಟಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜು. 31. 154 ಪ್ರಯಾಣಿಕರನ್ನು ಹೊತ್ತಿದ್ದ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಏರ್ ಇಂಡಿಯಾ ವಿಮಾನವು ಎಕ್ಸ್ ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ನಿಲ್ದಾಣದಿಂದ ಬೆಳಗ್ಗೆ 10:45ಕ್ಕೆ ಶಾರ್ಜಾಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, 12.03ಕ್ಕೆ ವಿಮಾನವನ್ನು ತಿರುವನಂತಪುರಂ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಅಧಿಕಾರಿಗಲು ತಿಳಿಸಿದ್ದಾರೆ.

Also Read  ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ ➤4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು

ತುರ್ತು ಭೂಸ್ಪರ್ಶದಿಂದಾಗಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಪ್ರಯಾಣಿಕರು ಪರದಾಡುವಂತಾಯಿತು. ಸದ್ಯ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಪ್ರಾಧಿಕಾರ ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

error: Content is protected !!
Scroll to Top