ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.


ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿದ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್​​ ನಿಟ್ಟುಸಿರು ಬಿಟ್ಟಿದ್ದಾರೆ.


ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯ ಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

Also Read  ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..!

error: Content is protected !!
Scroll to Top