(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಚರಣೆ ನಡೆಯುತ್ತಿದೆ..
