(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 1ರ ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 11.10ಕ್ಕೆ ಉಡುಪಿ ಜಿಲ್ಲೆಗೆ ರಸ್ತೆ ಮಾರ್ಗವಾಗಿ ತೆರಳುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10.45ಕ್ಕೆ ಬೆಂಗಳೂರಿಗೆ ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.