(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ.
ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ.
1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ್ದಾರೆ. ಜುಲೈ ತಿಂಗಳ 200 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ ಎಂದು ಮಾಹಿತಿ ನೀಡಿದರು ಎಂದು ವರದಿ ತಿಳಿಸಿದೆ.