ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 01. ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಳೆದೆರಡು ತಿಂಗಳ ಹಿಂದೆ ರಿಚ್ಮಂಡ್‌ ರಸ್ತೆ ಬಳಿಯ ಹೋಟೆಲ್‌ ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು. ಹೀಗಾಗಿ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್‌ ಪ್ರಕರಣ ದಾಖಲಿಸಿದ್ದರು.

Scroll to Top