ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ ಎಂದು ತಿಳಿದು ಬಂದಿದೆ

Also Read  ಡೊಂಗರಕೇರಿ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

error: Content is protected !!
Scroll to Top