11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಆ. 01. 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ,ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ನಾಲ್ಕು ತಿಂಗಳ ಹಿಂದೆ ಕಡಬ ಪೋಲಿಸರು ಆರೋಪಿ ರಾಜಿಕ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು 2ನೇ ಎ.ಸಿ.ಜೆ.ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಅವರು ಆರೋಪಿ ರಾಜಿಕ್‌ ಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Also Read  ಬೆತ್ತೋಡಿಯಲ್ಲಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ

error: Content is protected !!
Scroll to Top