ರಾಜ್ಯದಲ್ಲಿ ಆನ್‌ಲೈನ್ ಲೋನ್, ಗೇಮ್ ಆ್ಯಪ್ ಗಳು ಬ್ಯಾನ್ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 02. ರಾಜ್ಯದಲ್ಲಿ ಆನ್‌ಲೈನ್ ಲೋನ್ ಆ್ಯಪ್ ಮತ್ತು ಆನ್ ಲೈನ್ ಗೇಮ್ ಆ್ಯಪ್‌ಗಳನ್ನು ಬ್ಯಾನ್ ಮಾಡುವ ಬಗ್ಗೆ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.


ಅವರು ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಆನ್‌ಲೈನ್ ಲೋನ್‌ಗಳಿಂದ ಯುವ ಸಮುದಾಯ ತೊಂದರೆಗೊಳಗಾಗುತ್ತಿರುವ ಬಗ್ಗೆ ಮಾಹಿತಿಗಳು ಬಂದಿದೆ. ಆನ್‌ಲೈನ್ ಗೇಮ್‌ಗಳಿಂದಾಗಿ ಯುವ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಈ ಗೇಮ್ ಆ್ಯಪ್ ಮತ್ತು ಲೋನ್ ಆ್ಯಪ್‌ಗಳನ್ನು ಬ್ಯಾನ್ ಮಾಡುವ ಬಗ್ಗೆ ಯೋಚನೆ ಮಾಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳ ಮಾತಿಗೆ ಬಿಜೆಪಿ ಶಾಸಕರ ಸಹಿತ ಜನಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ.

ಕೆಡಿಪಿ ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಬಳಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕುವ ಬಗ್ಗೆ ಸೂಚನೆ ನೀಡಿದ ಸಿಎಂ, ಡ್ರಗ್ಸ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನು ಗಡಿಪಾರು ಮಾಡಬೇಕು. ಹಾಗೇ ಮುಲಾಜಿಲ್ಲದೇ ಅಂತವರ ಮೇಲೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಸಜೆಷನ್ ಬಾಕ್ಸ್‌ಗಳನ್ನು ಇಟ್ಟಲ್ಲಿ ಆಗ ಮತ್ತಷ್ಟು ಮಾಹಿತಿಗಳು ಲಭ್ಯವಾಗುತ್ತದೆ. ಇಲ್ಲದಿದ್ದರೆ ಅವರಿಗೆ ಭಯ ಇರುವುದಿಲ್ಲ ಎಂದು ಹೇಳಿದರು.

ಸೈಬರ್ ಕ್ರೈಮ್‌ಗಳ ಮೇಲೆ ನಿಗಾ ಇಡಬೇಕು. ಆನ್‌ಲೈನ್ ಲೋನ್‌ಗಳ ಮೇಲೆ‌ ಕ್ರಮ ತೆಗೆದುಕೊಳ್ಳಬೇಕು. ಆನ್‌ಲೈನ್ ಲೋನ್ ಹಾಗೂ ಬೆಟ್ಟಿಂಗ್‌ಗಳನ್ನು ಬ್ಯಾನ್ ಮಾಡಬೇಕೆಂದು ಯೋಚಿಸಿದ್ದೇನೆ. ಹಾಗೆಯೇ ನೈತಿಕ ಪೊಲೀಸ್‌ಗಿರಿ ವಿರುದ್ಧ ಸೀರಿಯಸ್ ಆಕ್ಷನ್ ತೆಗೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾರೇ ತಪ್ಪು ಮಾಡಿದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

error: Content is protected !!

Join the Group

Join WhatsApp Group