(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಆ. 05ರಂದು ಕಲಬುರಗಿಯ ಎನ್‌ವಿ ಮೈದಾನದಲ್ಲಿ ಬಹುನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ನಡುವೆ ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ ಮೊದಲ ದಿನವೇ ಮೀಟರ್ ರೀಡಿಂಗ್ ಮೂಲಕ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದ್ದು, ಹಲವು ಮಂದಿ ಗ್ರಾಹಕರು ತಮ್ಮ ಅನುಭವನ್ನು ಹಂಚಿಕೊಳ್ಳುತ್ತಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್,”ಕರ್ನಾಟಕ ಸರ್ಕಾರದ 5 ಪ್ರಮುಖ ಭರವಸೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿಯವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯಸಭೆಯ ಪತ್ರಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಿರಿಯ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು”, ಎಂದರು.
200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆ ಕೇವಲ ವಿದ್ಯುತ್ ಶುಲ್ಕದ ಕಡಿಮೆ ಮಾಡುತ್ತಿಲ್ಲ. ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ,”ಎಂದು ಜಾರ್ಜ್ ವಿವರಿಸಿದರು.