ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಇಬ್ಬರು ಮಹಿಳಾ ನಾಯಕಿರು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಮುಂದಾದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಮತ್ತೊಬ್ಬ ಮಹಿಳಾ ನಾಯಕಿಯನ್ನು ತಳ್ಳಿ ಮುಂದೆ ಹೋಗಿದ್ದಾರೆ. ಸಿಎಂ ಅವರನ್ನು ಸ್ವಾಗತಿಸಲು ಹೂಗುಚ್ಛ ತಂದಿದ್ದ ಕವಿತಾ ಎಂಬುವರು ಮೊದಲು ಕೊಡಲು ಮುಂದಾಗಿದ್ದಾರೆ. ಈ ವೇಳೆ ಶಾಲೆಟ್ ಪಿಂಟೋ ಕವಿತಾ ಅವರನ್ನು ತಳ್ಳಿ ಹೂಗುಚ್ಛ ನೀಡಿದ್ದಾರೆ. ಈ ವೇಳೆ ಇಬ್ಬರು ಸಿಎಂ ಎದುರಲ್ಲೇ ಕಿತ್ತಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Also Read  ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

 

error: Content is protected !!
Scroll to Top