ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್, ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ.


ಆನ್ಲೈನ್ ಗೇಮ್, ಲೋನ್ ಅಪ್ಲಿಕೇಶನ್ ಗಳಿಂದ ಸೈಬರ್ ಕ್ರೈಂ ಹೆಚ್ಚಾಗುತ್ತಿದ್ದು, ಹೀಗಾಗಿ ಆನ್ಲೈನ್ ಗೇಮ್ ಮತ್ತು ಲೋನ್ ಅಪ್ಲಿಕೇಶನ್ ನಿಷೇಧಕ್ಕೆ ಚಿಂತನೆ ನಡೆದಿದೆ ಎಂದು ಹೇಳಿದ ಸಿಎಂ, ಮಂಗಳೂರಿನಲ್ಲಿ ಡ್ರಗ್ಸ್ ಹಾವಳಿ ತಡೆಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Also Read  ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ

 

error: Content is protected !!
Scroll to Top