ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರತಿಸಲಾಗಿದೆ.


ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು ಎನ್ನಲಾಗಿದೆ.

Scroll to Top