ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಈ ಘಟನೆ ನಡೆದಿದೆ.


ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ ಫೋಟೋಗಳು ಪೊಲೀಸರಿಗೆ ಲಭಿಸಿತ್ತು. ಇದರಂತೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top