ಒಡಿಶಾ ರೈಲು ದುರಂತ….! – ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು

(ನ್ಯೂಸ್ ಕಡಬ)newskadaba.com ಒಡಿಶಾ, ಆ.02. ಒಡಿಶಾದ ಬಾಲಸೋರ್‌ನಲ್ಲಿ ರೈಲು ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದೆ. ಆದರೂ ಭುವನೇಶ್ವರದ ಏಮ್ಸ್‌ ಆಸ್ಪತ್ರೆಯಲ್ಲಿ ಇರಿಸಲಾದ 29 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಐಐಎಂಎಸ್‍ನ‌ ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಆದರಲ್ಲಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ ಬಳಿಕವಷ್ಟೆ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು. ಅಲ್ಲದೇ ಡಿಎನ್‍ಎ ಪರೀಕ್ಷೆ ಬಳಿಕವೂ ಗುರುತು ಪತ್ತೆಯಾಗದ ಮೃತದೇಹಗಳ ಸಂಸ್ಕಾರದ ಬಗ್ಗೆ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

Also Read  ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                          

 

error: Content is protected !!
Scroll to Top