ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ – ಮತ್ತೆ 50 ಪಿಎಸ್ಐಗಳ ವರ್ಗ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನೇಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಮತ್ತೆ ರಾಜ್ಯ ಸರ್ಕಾರ ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿ ಆದೇಶಿಸಿದೆ.

ಇತ್ತೀಚೆಗೆ 211 ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದು, ಇಂದು ಮತ್ತೆ 50 ಪಿಎಸ್​​​​ಐ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ.

Scroll to Top