ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ – ಆಟೋ ಚಾಲಕನ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ ಎನ್ನಲಾಗಿದೆ.


ಆಟೋದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ ಸಂಘ ಪರಿವಾರದ ಕಾರ್ಯಕರ್ತರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಆಟೋ ಚಾಲಕನನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ. ಈ ಕುರಿತು ‌ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top