ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ.


ಇಂದು ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ. ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆಯಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿದ್ದಾರೆ.

Also Read  ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ


ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ. 15 ರಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಅದ್ದೂರಿ ಚಾಲನೆ ನೀಡಲಾಗುತ್ತದೆ. ವಸ್ತು ಪ್ರದರ್ಶನ ಕೂಡ ಅಂದೇ ಆರಂಭ ಆಗಲಿದ್ದು, ಇದೇ ಸಂದರ್ಭದಲ್ಲಿ ಏರ್ ಶೋ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

error: Content is protected !!
Scroll to Top