(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.06 ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿದುಬಂದಿದೆ.