ಯುರೋಪ್ ನಿಂದ ನಾಳೆ ವಾಪಸಾಗಲಿರುವ HDK

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ಯುರೋಪ್ ಪ್ರವಾಸಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ರಾಜ್ಯಕ್ಕೆ ಮರಳಲಿದ್ದಾರೆ. ಅವರು ಕುಟುಂಬ ಸದಸ್ಯರೊಂದಿಗೆ ಜುಲೈ 23ರಂದು ಯೂರೋಪ್ ಪ್ರವಾಸ ಕೈಗೊಂಡಿದ್ದರು.


ಯೂರೋಪಿನ ವಿವಿಧ ನಗರ ಹಾಗೂ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವ ಅವರು, ಎರಡು ವಾರಗಳ ಪ್ರವಾಸ ಪೂರ್ಣಗೊಳಿಸಿದ್ದು, ನಾಳೆ ನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಅವರು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ವಿದೇಶ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸ ಖಾಸಗಿಯಾಗಿದ್ದು, ಕುಟುಂಬದ ಸದಸ್ಯರಿಗೆ ಸೀಮಿತವಾಗಿತ್ತು ಎಂದು ಪಕ್ಷದ ಮೂಲಗಳು ಹೇಳಿವೆ.

Also Read  ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ - ಎಚ್.ಡಿ ದೇವೇಗೌಡ

error: Content is protected !!
Scroll to Top