ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು ಅಪಾಯಕಾರಿಯಾಗಿ ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು.

Also Read  ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಪರ್ಕಳ ನಿವಾಸಿ ಆಶಿಕ್ (19) ಎಂಬಾತನನ್ನು ಬಂಧಿಸಿದ್ದು, ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

error: Content is protected !!
Scroll to Top