ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ – ಓರ್ವ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 03. ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಜೈಲು ಸೇರಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ ಎಂಬಾತನಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

2022ರ ಜು. 19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡವೊಂದು ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿದ್ದರು.


ಪ್ರಕರಣದ 8ನೇ ಆರೋಪಿ ಭಾಸ್ಕರ ಕೆ.ಎಂ. ಎಂಬಾತ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು ಆ.‌ 03 ರಂದು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

Also Read  ನೆಲ್ಲಿಕಾರು ಗ್ರಾಮ ಸಭೆ ಮತ್ತು ವಾರ್ಡು ಸಭೆ

error: Content is protected !!
Scroll to Top