ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, . 03. ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಭಾಷನಗರದ ಸುಶಾಂತ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯ ಮುಗಿಸಿದ್ದ ಸುಶಾಂತ್ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆತನನ್ನು ಸೇರಿಸಿದ್ದರು. ಈ ವೇಳೆ ರೂ. 500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆಯಿಂದ ಹೊರಗೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ನಮ್ಮ ಜವಾಬ್ದಾರಿ ನಿಭಾಯಿಸೋಣ- ರವೀಂದ್ರನಾಥ್

error: Content is protected !!
Scroll to Top