ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, . 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31 ರಂದು ಕೈ ನೋವು ಎಂದು ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ಹೋಟೆಲ್ ನಿಂದ ಆಕ್ಟೀವಾ ಸ್ಕೂಟರ್ ನಲ್ಲಿ ತೆರಳಿದ ಅವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಂದೀಪ್ ಅವರ ಪತ್ನಿ ಅಕ್ಷತಾರವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Also Read  ಅತಂತ್ರ ದಾಂಪತ್ಯವನ್ನು ಸರಿಪಡಿಸುವ ತಂತ್ರ

error: Content is protected !!
Scroll to Top