(ನ್ಯೂಸ್ ಕಡಬ) newskadaba.com ಅಲಹಾಬಾದ್, ಆ. 03. ಜ್ಞಾನವಾಪಿ ಮಸೀದಿ ಆವರಣದಲ್ಲಿ ಸರ್ವೇ ನಡೆಸಲು ಅಲಹಾಬಾದ್ ಉಚ್ಛ ನ್ಯಾಯಾಲಯವು ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಅಂಜುಮನ್ ಇಂತೆ ಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವೇ ಸರ್ವೆ ಕಾರ್ಯ ನಡೆಯಲಿದೆ ಎಂದಿದೆ. ಇನ್ನು ನ್ಯಾಯದ ಹಿತಾಸಕ್ತಿಯಿಂದ ಮಸೀದಿ ಆವರಣದ ಸರ್ವೆ ನಡೆಸುವುದು ಅವಶ್ಯಕ ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ಒಂದಿಷ್ಟು ಷರತ್ತಿನಡಿ ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ.
ತೀರ್ಪನ್ನು ಸ್ವಾಗತಿಸಿದ ಉತ್ತರ ಪ್ರದೇಶದ ಡಿಸಿಎಂ ಕೇಶವ ಪ್ರಸಾದ್ ಮೌರ್ಯ, ನಾನು ಈ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯ ಹೊರಬರಲಿದೆ ಎಂಬ ವಿಶ್ವಾಸವಿದೆ. ಸರ್ವೆ ಬಳಿಕ ಜ್ಞಾನವಾಪಿ ವಿವಾದ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.