ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, . 04. ಇತ್ತೀಚೆಗೆ ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಸಿದಂತೆ ಸಂತ್ರಸ್ತೆ ವಿದ್ಯಾರ್ಥಿನಿ ಗುರುವಾರದಂದು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆ ನೀಡಿರುವ ಕುರಿತು ವರದಿಯಾಗಿದೆ.

ಜುಲೈ18ರಂದು ಸಂತ್ರಸ್ತೆ ಕಾಲೇಜಿನ ಶೌಚಾಲಯದಲ್ಲಿದ್ದ ವೇಳೆ 3 ಮಂದಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲಿನಲ್ಲಿ ಆಕೆಯ ಚಿತ್ರೀಕರಣ ನಡೆಸಿದ್ದರು. ನಂತರ ಅದು ವಿವಾದಕ್ಕೆ ಕಾರಣವಾಗಿತ್ತು ಎಂದು ಅಂದು ನಡೆದ ಘಟನೆಯ ವಿವರಗಳನ್ನು ಆಕೆ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದ್ದಾಳೆ. ನ್ಯಾಯಾಲಯ ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.

Also Read  ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ

error: Content is protected !!
Scroll to Top