ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.04. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಂದೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ ಎನ್ನಲಾಗಿದೆ.


ಮೆಲ್ಕಾರ್ ಮಹಿಳಾ ಕಾಲೇಜಿನಿಂದ ಮನೆಗೆ ಹೋಗಲು ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಾ ನಿಂತಿದ್ದ ವೇಳೆ ,ಬೈಕಿನಲ್ಲಿ ಬಂದ ಯುವಕ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಗೆ ಯುವಕ ಕಿರುಕುಳ ನೀಡಿದ ಕಾರಣ ಹೆದರಿದ ಬಾಲಕಿ ಮೂರ್ಚೆ ಹೋಗಿ ರಸ್ತೆ ಬದಿ ಬಿದ್ದಿದ್ದಳು. ವಿಷಯ ತಿಳಿದ ಬಾಲಕಿಯ ತಂದೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪರಿಣಾಮವಾಗಿ ಹೆದರಿ ಮೂರ್ಚೆ ತಪ್ಪಿ ಬಿದ್ದಿದ್ಧಾಳೆ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.

Also Read  ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು!   ➤  ನಾಲ್ವರು ನಕಲಿ ಟಿಟಿಇಗಳು ಪತ್ತೆ.!!  

error: Content is protected !!
Scroll to Top