ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

Theft, crime, Robbery

(ನ್ಯೂಸ್ ಕಡಬ) newskadaba.com ಉಳ್ಳಾಲ, . 04. ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ, ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಇಲ್ಲಿನ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು, ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್, ಹ್ಯಾರೀಸ್ ಎಂಬವರಿಗೆ ಸೇರಿದ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್.ಎಸ್ ಕಮ್ಯುನಿಕೇಷನ್ಸ್ ಮೊಬೈಲ್ ಅಂಗಡಿಗಳ ಹೆಂಚು ತೆಗೆದು ಒಳನುಗ್ಗಿದ ಕಳ್ಳ ಕ್ಯಾಷ್ ನಲ್ಲಿದ್ದ ನಗದು ಹಾಗೂ ಕೆಲವು ಸಾಮಗ್ರಿಗಳನ್ನು ಕಳವುಗೈದಿದ್ದಾನೆ. ಕಳ್ಳ ಸ್ಟೀಲ್ ಪಾತ್ರೆಗಳ ಅಂಗಡಿಯೊಳಗೆ ನಡೆಸಿದ ಕೃತ್ಯವು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳ್ಳನ ಮುಖವೂ ಅದರಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಕೃತ್ಯಕ್ಕೆ ಸಂಬಂಧಿಸಿ ಹೊರರಾಜ್ಯದ ಕಾರ್ಮಿಕರು ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Also Read  ಕೈಕಂಬ: ಹೆದ್ದಾರಿಗೆ ಉರುಳಿ ಬಿದ್ದ ಮರ ಪಿಡಬ್ಲ್ಯೂಡಿಯಿಂದ ತೆರವು ➤ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು

error: Content is protected !!
Scroll to Top