ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ

(ನ್ಯೂಸ್ ಕಡಬ)newskadaba.com ಶ್ರೀನಗರ, ಆ.04. ಜಮ್ಮು ಮತ್ತು ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪೊಲೀಸರು ಇದೀಗ ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ನಾಪತ್ತೆಯಾಗಿದ್ದ ಜಾವೆದ್ ಅಹ್ಮದ್ ವಾನಿ (25) ಎಂಬ ಸೇನಾ ಯೋಧನನ್ನು ಕುಲ್ಗಾಮ್ ವಶಪಡಿಸಿಕೊಳ್ಳಲಾಗಿದ್ದು, ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ ಆತಂಕವಿತ್ತು. ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

Also Read  ಪಿಂಚಣಿದಾರರ ಅಹವಾಲು ➤ ಶೀಘ್ರದಲ್ಲಿ ಸಭೆ

 

error: Content is protected !!
Scroll to Top