ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.04. ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್(17)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.


ಪ್ರಥಮ ಪಿಯುಸಿಯನ್ನು ಮುಗಿಸಿದ್ದ ಸುಶಾಂತ್ ಗೆ ಡಿಪ್ಲೊಮಾಗೆ ಸೇರಿಸಲಾಗಿತ್ತು. 500ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದು, ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲಿದ್ದ ಸುಶಾಂತ್ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Scroll to Top