(ನ್ಯೂಸ್ ಕಡಬ)newskadaba.com ಮೇಘಾಲಯ, ಆ.04. ವಿದ್ಯಾರ್ಥಿಗೆ ಇಂಗ್ಲೀಷ್ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಕೊಳಕು ಚಪ್ಪಲಿಗಳ ಹಾರ ಹಾಕಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಮೇಘಾಲಯದಿಂದ ವರದಿಯಾಗಿದೆ. ಈ ಕುರಿತು ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಶಿಕ್ಷಕರ ವರ್ತನಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಮಕ್ಕಳು ತಪ್ಪು ಮಾಡಿದರೆ ತಿದ್ದಿ ಹೇಳಬೇಕು ಆದರೆ, ಅದರ ಬದಲು ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ್ದು ತಪ್ಪು ಎಂದು ದೂರಿನಲ್ಲಿ ಹೇಳಲಾಗಿದೆ. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಜಿಲ್ಲೆಯ ಶಿಕ್ಷಣ ಇಲಾಖೆಯಿಂದ ವರದಿ ಕೇಳಿದ್ದೇನೆ ಎಂದು ಮೇಘಾಲಯದ ಶಿಕ್ಷಣ ಸಚಿವ ರಕ್ಕಮ್ ಎ ಸಂಗ್ಮಾ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.