ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ ► ಇಂದು ಮಂಗಳೂರಿನಲ್ಲಿ ಉದ್ಯೋಗ ಮೇಳ, ವಿವಿಧ ಕಂಪೆನಿಗಳು ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.03. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಹಾಗೂ ಯೆನೆಪೋಯ ಕಾಲೇಜು, ಬಲ್ಮಠ ಮಂಗಳೂರು, ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಫೆಬ್ರವರಿ 03) ಬೆಳಿಗ್ಗೆ 10.30 ರಿಂದ ಯೆನಪೋಯಾ ಕಾಲೇಜು, ಬಲ್ಮಠ, ಮಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಿದ್ದು, ಈ ಉದ್ಯೋಗಮೇಳದಲ್ಲಿ ಎಸ್.ಎಸ್.ಎಲ್.ಸಿ.ಗಿಂತ ಕಡಿಮೆ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 10 ಬಯೋಡಾಟ ಪ್ರತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 0824-2457139 ಮೂಲಕ ಸಂಪರ್ಕಿಸಲು ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

 

error: Content is protected !!
Scroll to Top