ಪ್ರಚೋದನಕಾರಿ ಹೇಳಿಕೆ – ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಇಲ್ಲಿನ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜುಲೈ 28ರಂದು ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ  ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎಂದು ಹೇಳಿದ್ದರು ಎನ್ನಲಾಗಿದೆ.

Also Read  ಬೆಳಂದೂರು: ಮೆಸ್ಕಾಂ ವತಿಯಿಂದ ಸಾರ್ವಜನಿಕ ಸಭೆ ► ಆಲಂಕಾರಿನಲ್ಲಿ 110 ಕೆ.ವಿ. ಉಪಕೇಂದ್ರದ ಸ್ಥಾಪನೆಯ ಸಾಧಕ - ಬಾಧಕಗಳ ಚರ್ಚೆ

ಇದೀಗ ವೀಣಾ ಶೆಟ್ಟಿಯವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಹಿನ್ನೆಲೆ ಅವರ ಹೇಳಿಕೆ ಕೋಮು ದ್ವೇಷ, ಧರ್ಮ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

error: Content is protected !!
Scroll to Top