ನಡು ರಸ್ತೆಯಲ್ಲೇ ಹೊತ್ತಿ ಉರಿದ ಶಾಲಾ ವಿದ್ಯಾರ್ಥಿಗಳಿದ್ದ‌ ಬಸ್ ► ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ.03. ಹಂಪಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಬೆಂಕಿ ತಗುಲಿ ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಹೊಸಪೇಟೆ ಬೈಪಾಸ್ ನಲ್ಲಿ ಶುಕ್ರವಾರದಂದು ರಾತ್ರಿ ನಡೆದಿದೆ.

ಹುನಗುಂದ ತಾಲೂಕಿನ ವಜ್ಜಲ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ಶಿಕ್ಷಕರೊಂದಿಗೆ ಹಂಪಿ ಪ್ರವಾಸಕ್ಕೆ ಆಗಮಿಸಿದ್ದರು. ಶುಕ್ರವಾರ ರಾತ್ರಿ ಶಾಲಾ ಮಕ್ಕಳ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್ಸಿನಲ್ಲಿದ್ದ ಮಕ್ಕಳನ್ನು ಬಸ್ ಸಿಬ್ಬಂದಿ ಹಾಗೂ ಸ್ಥಳೀಯರು ಬಸ್ ಗಾಜುಗಳನ್ನು ಒಡೆದು ರಕ್ಷಣೆ ಮಾಡಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಬಹುದೊಡ್ಡ ಅನಾಹುತ ತಪ್ಪಿದಂತಾಗಿದೆ.

Also Read  400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

error: Content is protected !!
Scroll to Top