ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಕಾರ್ಕಳ, . 04. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಶುಕ್ರವಾರದಂದು ಮುಂಜಾನೆ ಸಂಭವಿಸಿದೆ.

ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆನ್ನಲಾಗಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

Also Read  ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನ:ಶ್ಚೇತನಕ್ಕೆ ತುರ್ತು ಸಾಲ ಒದಗಿಸಿ ➤ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ

error: Content is protected !!
Scroll to Top